ಕಾಶ್ಮೀರಿಗಳ ಹಕ್ಕು ಕಿತ್ತುಕೊಳ್ಳುವುದು ದೇಶ ವಿರೋಧಿ ಕೃತ್ಯಕ್ಕಿಂತ ದೊಡ್ಡದು: ಪ್ರಿಯಾಂಕಾ ಗಾಂಧಿ

0

(ಕಾರವಾರ ನ್ಯೂಸ್)ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದಲ್ಲಿ ನಿರ್ಬಂಧಗಳನ್ನು ವಿಧಿಸಿರುವ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಕಾಶ್ಮೀರಿಗಳ ಪ್ರಜಾಪ್ರಭುತ್ವ ಹಕ್ಕು ಕಿತ್ತುಕೊಳ್ಳುವುದು ದೇಶ ವಿರೋಧಿ ಕೃತ್ಯಕ್ಕಿಂತ ದೊಡ್ಡದು ಎಂದಿದ್ದಾರೆ.

ಕಾಶ್ಮೀರ ಭೇಟಿಗೆ ತೆರಳಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಪ್ರತಿಪಕ್ಷಗಳ ನಾಯಕರನ್ನು ಶ್ರೀನಗರ ವಿಮಾನ ನಿಲ್ದಾಣದಿಂದ ವಾಪಸ್ ಕಳುಹಿಸಿದ ಮಾರನೇ ದಿನ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ಇದು ಇನ್ನೆಷ್ಟು ದಿನ ಮುಂದುವರೆಯುತ್ತದೆ? ರಾಷ್ಟ್ರವಾದ ಹೆಸರಿನಲ್ಲಿ ಕೋಟ್ಯಾಂತರ ಜನರ ಮುಚ್ಚಿಸಿದ ಪ್ರಕರಣಗಳಲ್ಲಿ ಇದೂ ಒಂದು ಎಂದು ಹೇಳಿದ್ದಾರೆ. ಅಲ್ಲದೆ ನಿನ್ನೆ ವಿಮಾನದಲ್ಲಿ ರಾಹುಲ್ ಗಾಂಧಿ ಮುಂದೆ ಕಾಶ್ಮೀರಿ ಮಹಿಳೆ ತನ್ನ ಅಳಲು ತೋಡಿಕೊಳ್ಳುತ್ತಿರುವ ವಿಡಿಯೋವನ್ನು ಪ್ರಿಯಾಂಕಾ ಗಾಂಧಿ ರೀ-ಟ್ವೀಟ್ ಮಾಡಿದ್ದಾರೆ.

ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರಜಾಪ್ರಭುತ್ವ ಹಕ್ಕುಗಳ ಕಗ್ಗೊಲೆ ರಾಜಕೀಯ ಹಾಗೂ ರಾಷ್ಟ್ರ ವಿರೋಧಿ ಕೃತ್ಯಕ್ಕಿಂತ ದೊಡ್ಡದು ಮತ್ತೊಂದು ಇಲ್ಲ. ಇದರ ವಿರುದ್ಧ ನಾವು ಧ್ವನಿ ಎತ್ತುತ್ತೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here